ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ : ಪ್ರವಾಹದ ಭೀತಿ
ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ : ಪ್ರವಾಹದ ಭೀತಿ
ಬಂಗಾಳ ಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ಮಳೆ ನೀರಲ್ಲಿ ಕೊಚ್ಚಿ ಹೋಗಿದೆ.ಹಾಗೆ ಸಾವಿರಾರು ಮನೆಗಳು ಸಹ ಕುಸಿಯುವ ಭೀತಿ ಆವರಿಸಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಸೂಚನೆ ಸಿಕ್ಕಿರುವುದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.
6 ಜಿಲ್ಲೆಗಳಲ್ಲಿ 3 ದಿನ ರೆಡ್ ಅಲರ್ಟ್ ಘೊಷಿಸಲಾಗಿದೆ.
ಕ್ರಮಕ್ಕೆ ಸಿಎಮ್ ಬಿಎಸ್‌ಯೈ ಸೂಚನೆ
ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲಿಯೆ ಮೊಕ್ಕಾಂ ಮಾಡಿ ಪರಿಹಾರ ಕರ್ಯಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂಪಪ್ಪ ತಾಕೀತು ಮಾಡಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ಕಡೆಗಳಲ್ಲಿ ಅತಿವೃಷ್ಟಿಯಿಂದಾಗಿ ಆಸ್ತಿಪಾಸ್ತಿ ಹಾನಿಯಾಗಿದೆ. ಅದನ್ನು ಮನಗಂಡು ಅಧಿಕಾರಿಗಳು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ಣಿಡಿದ್ದಾರೆ.



ಕಾಮೆಂಟ್‌ಗಳಿಲ್ಲ