SC AND ST ಪ.ಜಾ ಮತ್ತು ಪ.ಪಂಗಡದ ಅಭ್ಯರ್ಥಿಗಳ ಉದ್ಯೋಗಕ್ಕೆ 'ಆಶಾದೀಪ'
SC AND ST ಪ.ಜಾ ಮತ್ತು ಪ.ಪಂಗಡದ ಅಭ್ಯರ್ಥಿಗಳ ಉದ್ಯೋಗಕ್ಕೆ 'ಆಶಾದೀಪ'
|
ಬೆಂಗಳೂರು,
ಅಕ್ಟೋಬರ್ 09: SC AND ST ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು
ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲು ಸರ್ಕಾರ 'ಆಶಾದೀಪ' ಎಂಬ ಯೋಜನೆ ಜಾರಿಗೊಳಿಸಿದೆ. 2017-18ರ ಬಜೆಟ್‌ನಲ್ಲಿ ಇದನ್ನು ಘೋಷಿಸಲಾಗಿತ್ತು. ಕರ್ನಾಟಕ
ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯ ಮೂಲಕ ಈ ಯೋಜನೆಯನ್ನು
ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದವರಿಗೆ ಖಾಸಗಿ ವಲಯದ
ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದು, ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು ಯೋಜನೆಯ
ಪ್ರಮುಖ ಉದ್ದೇಶವಾಗಿದೆ.
ಸರ್ಕಾರ ಪರಿಶಿಷ್ಟ
ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಿಗೆ ಹೆಚ್ಚು ನೇಮಕಾತಿ
ಮಾಡಿಕೊಳ್ಳಲು ಮಾಲೀಕರನ್ನು/ಉದ್ಯೋಗದಾರನ್ನು ಉತ್ತೇಜಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ.
ಪ.ಜಾ/ಪ.ಪಂಗಡದ ಅಭ್ಯರ್ಥಿಗಳಿಗೆ ಇದು ನಿಜಕ್ಕೂ 'ಆಶಾದೀಪ'ವಾಗಿದೆ.
ಮರು ಪಾವತಿ
ಮಾಡಡಲಾಗುತ್ತದೆ ಹೊಸದಾಗಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಉದ್ಯೋಗಿಗಳಿಗೆ
ಮಾಲೀಕರು/ಉದ್ಯೋಗದಾತರು ಕಡ್ಡಾಯವಾಗಿ ಪಾವತಿಸಿದ ಶಾಸನಬದ್ಧ ಭವಿಷ್ಯನಿಧಿ ಹಾಗೂ ಇ.ಎಸ್.ಐ
ವಂತಿಕೆಯನ್ನು ರಾಜ್ಯ ಸರ್ಕಾರದಿಂದ ಮಾಲೀಕರು/ ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿಯ ವರೆಗೆ
ಮಾಸಿಕ ಗರಿಷ್ಠ ರೂ.3000/- ಗಳ ಮಿತಿಯೊಳಗೆ
ಮರುಪಾವತಿ ಮಾಡಲಾಗುವುದು.



ಕಾಮೆಂಟ್‌ಗಳಿಲ್ಲ