Breaking News

School Opening ಶಾಲೆ ತೆರೆಯುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

 ಶಾಲೆ ತೆರೆಯುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Source : google


ಕೋವಿಡ್ ಪ್ರಸರಣದ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಧಾವಂತವೂ ಇಲ್ಲ, ನಮಗೆ ಶಾಲೆ ಈಗಲೇ ತೆರೆಯಬೇಕೆಂಬ ಪ್ರತಿಷ್ಠೆಯೂ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಪ್ರಾರಂಭ ಕುರಿತು ಪ್ರಾಥಮಿಕ ಶಾಲೆ, ಪ್ರೌಢಶಾಲೆ ಶಿಕ್ಷಕರ ಸಂಘಟನೆಗಳ ಹಾಗೂ ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳೊಂದಿಗೆ ಗುರುವಾರ ವೆಬಿನಾರ್ ಸಂವಾದ ನಡೆಸಿ ಮಾತನಾಡಿದ ಅವರು, ಸರ್ಕಾರಕ್ಕೆ ಈ ನಾಡಿನ ಮಕ್ಕಳ ಹಿತವೇ ಪ್ರಮುಖವಾಗಿದ್ದು, ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದರು.


ನಾನು ಶಿಕ್ಷಣ ಸಚಿವ ಎಂಬುದಕ್ಕಿಂತ ರಾಜ್ಯದ ಎಲ್ಲ ಶಾಲಾ ಮಕ್ಕಳ ಪೋಷಕನೂ ಆಗಿದ್ದೇನೆ ಎಂಬ ಅಂಶವೇ ಪ್ರಮುಖವಾಗಿದ್ದು, ಎಲ್ಲ ಪೋಷಕರಂತೆ ನನಗೂ ಆತಂಕ ಇಲ್ಲದೇ ಇಲ್ಲ, ನನಗೂ ಮಕ್ಕಳ ಹಿತವೇ ಮುಖ್ಯವಾಗಿದೆ' ಎಂದು ಹೇಳಿದ ಸಚಿವರು, ಈ ನಿಟ್ಟಿನಲ್ಲಿ ಸಾರ್ವಜನಿಕ ಅಭಿಪ್ರಾಯ ಆಲಿಸುವ ಸರಣಿ ಆರಂಭಿಸಿದ್ದು, ಇಂದು ಶಿಕ್ಷಕ-ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇನೆ. ಅತಿ ಶೀಘ್ರದಲ್ಲಿ ಶಿಕ್ಷಣ ತಜ್ಞರು, ಪೋಷಕ ಸಂಘಟನೆಗಳು, ಶಿಕ್ಷಣ ಪ್ರೇಮಿಗಳು, ಖಾಸಗಿ ಶಾಲಾ ಸಂಸ್ಥೆಗಳು, ಜನಪ್ರತಿನಿಧಿಗಳೂ ಸೇರಿದಂತೆ ಶಾಸಕರು, ಸಂಸದರು ಸೇರಿದಂತೆ ಶಿಕ್ಷಣ ಕ್ಷೇತ್ರದ ಎಲ್ಲ ಪಾಲುದಾರರೊಂದಿಗೆ ಚರ್ಚಿಸಿ ಎಲ್ಲರ ಅಭಿಪ್ರಾಯ ಪಡೆಯಲಾಗುವುದು. ಆ ಮೂಲಕ ಮಕ್ಕಳ ಹಿತಕ್ಕೆ ಪೂರಕವಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಇದು ಅಭಿಪ್ರಾಯ ಸಂಗ್ರಹ ಮಾತ್ರವೇ ಆಗಿದೆ ಎಂದರು.

ಮಾದರಿ SOP ಅಷ್ಟೇ! 

ಮುಂದೆ ಶಾಲೆಗಳನ್ನು ಆರಂಭಿಸಬೇಕಾಗಬಹುದೆಂಬ ದೃಷ್ಟಿಯಿಂದ ಕೆಲವು ಎಸ್ಒಪಿಗಳನ್ನು ಸಿದ್ಧಪಡಿಸಿಕೊಳ್ಳಲಾಗಿತ್ತಷ್ಟೇ, ಆದರೆ ಅದು ಶಾಲಾ ಅರಂಭದ ಸಿದ್ಧತೆ ಎಂದು ಕೆಲವರು ಭಾವಿಸಿದ್ದಾರೆ. ಆದು ಶಾಲಾರಂಭ ಕುರಿತ ಟಿಪ್ಪಣಿಯೇನೂ ಅಲ್ಲ ಎಂದ ಸಚಿವರು, ಶಾಲಾ ಆರಂಭ ಕುರಿತು ಕೇಂದ್ರ ಸರ್ಕಾರವು ರಾಜ್ಯಗಳ ವಿವೇಚನೆಗೆ ಬಿಟ್ಟಿದೆ. ಹಾಗಂತ ನಾವು ದಿಢೀರ್ ಶಾಲೆ ತೆರೆಯಲು ಮುಂದಾಗಿಲ್ಲ, ಅಂತಹ ಧಾವಂತವೂ ಇಲ್ಲ, ಕಟ್ಟಕಡೆಯದಾಗಿ ನಮಗೆ ಮಕ್ಕಳ ಆರೋಗ್ಯವೇ ಪ್ರಮುಖವಾಗಿರುವುದರಿಂದ ಮಕ್ಕಳ ಹಿತಕ್ಕೆ ಧಕ್ಕೆಯಾಗಬಹುದಾದಂತಹ ಯಾವುದೇ ನಿರ್ಧಾರವನ್ನು ದಿಢೀರ್ ತೆಗೆದುಕೊಳ್ಳುವುದಿಲ್ಲ, ನಮ್ಮ ಪೋಷಕರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದರು.


ಕಾಮೆಂಟ್‌ಗಳಿಲ್ಲ