Bihar Election 2020 : ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಎನ್‌ಡಿಎ, ಮಹಾ ಘಟಬಂಧನದ ಕನಸು ಭಗ್ನ
Bihar Election 2020 : ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಎನ್‌ಡಿಎ, ಮಹಾ ಘಟಬಂಧನದ ಕನಸು ಭಗ್ನ
ಆಡಳಿತಾರೂಢ ಎನ್‌ಡಿಎ
ವಿರುದ್ಧದ ಅಲೆ, ನಿರುದ್ಯೋಗದ
ಸಮಸ್ಯೆ ಮುಂತಾದವು ಜೆಡಿಯು-ಬಿಜೆಪಿ ಮೈತ್ರಿಕೂಟಕ್ಕೆ ಮುಳುವಾಗಲಿದೆ ಎಂದು ನಂಬಲಾಗಿತ್ತು. ಆದರೆ
ಮತದಾರರು ಎನ್‌ಡಿಎಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಈ ಮೂಲಕ ಬಿಹಾರದಲ್ಲಿ ಅಧಿಕಾರಕ್ಕೇರುವ
ತೇಜಸ್ವಿ ಯಾದವ್ ನೇತೃತ್ವದ ಮಹಾ ಘಟಬಂಧನದ ಕನಸು ನುಚ್ಚುನೂರಾಗಿದೆ.
ಎನ್‌ಡಿಎ
ಮೈತ್ರಿಕೂಟದಲ್ಲಿ ಬಿಜೆಪಿ 74, ಜೆಡಿಯು 43,
ಎಚ್‌ಎಎಂ-ಎಸ್ 4, ವಿಐಪಿ 4 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ 125 ಸೀಟುಗಳಲ್ಲಿ ಗೆಲುವು ಸಾಧಿಸಿ ವಿಜಯದ ನಗೆ ಬೀರಿದೆ.
ಇನ್ನೊಂದೆಡೆ ಅದಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ 75 ಸೀಟುಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕಾಂಗ್ರೆಸ್ 19, ಸಿಪಿಐ ಎಂಎಲ್ಎಲ್ 12,
ಸಿಪಿಐ 2, ಸಿಪಿಐ ಎಂ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ
ಮಹಾಘಟಬಂಧನ ಮೈತ್ರಿಕೂಟವು 110 ಸ್ಥಾನಗಳಿಗೆ
ತೃಪ್ತಿಪಟ್ಟುಕೊಂಡಿದೆ. ಎಐಎಂಐಎಂ 5 ಕ್ಷೇತ್ರಗಳಲ್ಲಿ,
ಬಿಎಸ್‌ಪಿ, ಎಲ್‌ಜೆಪಿ ಮತ್ತು ಪಕ್ಷೇತರರು ತಲಾ ಒಂದು
ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.
ಬಿಹಾರದ 243 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ
ನಡೆದಿತ್ತು. ಮಂಗಳವಾರ ಬೆಳಿಗ್ಗೆ ಆರಂಭವಾದ ಮತ ಎಣಿಕೆ ತೀರಾ ನಿಧಾನಗತಿಯಲ್ಲಿ ಸಾಗಿದ್ದರಿಂದ
ಅಂತಿಮ ಫಲಿತಾಂಶ ಹೊರಬೀಳುವುದು ವಿಳಂಬವಾಗಿದೆ. ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಹೆಚ್ಚಿನ
ಮುಂಜಾಗರೂಕತಾ ಕ್ರಮಗಳೊಂದಿಗೆ ಮತ ಎಣಿಕೆ ನಡೆಸಲಾಗಿತ್ತು. ಹೀಗಾಗಿ ಫಲಿತಾಂಶ ಪ್ರಕಟ ತಡವಾಗಿದೆ.
ಸಾಮಾನ್ಯವಾಗಿ ಸಂಜೆಯ ವೇಳೆಗೆ ಸ್ಪಷ್ಟ ಚಿತ್ರಣ ದೊರಕುತ್ತಿತ್ತು. ಆದರೆ ಈ ಬಾರಿ ಫಲಿತಾಂಶ
ಪ್ರಕಟವಾಗುವುದು ತಡರಾತ್ರಿಯಾಗಿರುವುದು ವಿಶೇಷ.
ಈ ಗೆಲುವಿನೊಂದಿಗೆ
ನಿತೀಶ್ ಕುಮಾರ್ ಐದನೇ ಬಾರಿಗೆ ಅಧಿಕಾರಕ್ಕೆ ಏರಲು ವೇದಿಕೆ ಸಿದ್ಧವಾಗಿದೆ. ಸರ್ಕಾರ ರಚಿಸಲು 122 ಸೀಟುಗಳ ಅಗತ್ಯವಿದ್ದು, ಎನ್‌ಡಿಎ ಮೈತ್ರಿಕೂಟ ಮೂರು ಹೆಚ್ಚುವರಿ ಸೀಟುಗಳನ್ನು
ಪಡೆದುಕೊಂಡಿದೆ. ನಿತೀಶ್ ಕುಮಾರ್ ಅವರೇ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ
ಮುಂಚಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದೆ. ಅದೇ ರೀತಿ ನಡೆದರೆ ಎನ್‌ಡಿಎ ಮೈತ್ರಿಕೂಟ
ಮತ್ತೊಮ್ಮೆ ಸರ್ಕಾರ ರಚಿಸಲಿದೆ.
Press Briefing of Election Commission of India. #BiharAssemblyElection2020. https://t.co/bYMdV2Bd6Z



ಕಾಮೆಂಟ್‌ಗಳಿಲ್ಲ