Breaking News

ನೂತನ ಸಂಸತ್ ಭವನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ

 ನೂತನ ಸಂಸತ್ ಭವನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ

New Parliament Building: ನೂತನ ಸಂಸತ್ ಭವನದ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆಗೆ ಕೇವಲ 200 ಗಣ್ಯರನ್ನು ಆಹ್ವಾನಿಸಲಾಗಿದೆ. 64,500 ಚ.ಮೀ. ವಿಸ್ತೀರ್ಣದಲ್ಲಿ, 971 ಕೋಟಿ ರೂ. ವೆಚ್ಚದಲ್ಲಿ ಸಂಸತ್ ಭವನದ ಕಟ್ಟಡ ನಿರ್ಮಾಣವಾಗಲಿದೆ.

ನವದೆಹಲಿ (ಡಿ. 10): ದೆಹಲಿಯ ರಾಜಪಥದಲ್ಲಿ 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಮಾರಂಭದಲ್ಲಿ ಅನೇಕ ರಾಜಕೀಯ ಪಕ್ಷಗಳ ನಾಯಕರು, ಸಚಿವರು, ವಿವಿಧ ದೇಶಗಳು ರಾಯಭಾರಿಗಳು ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 12.55ಕ್ಕೆ ಭೂಮಿ ಪೂಜೆ, ಬಳಿಕ ಸಂಸತ್ ಭವನದ ಶಿಲಾನ್ಯಾಸ ನೆರವೇರಲಿದೆ.

 

ಇಂದು ಮಧ್ಯಾಹ್ನ ನಡೆಯುವ ನೂತನ ಸಂಸತ್ ಭವನದ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆಗೆ ಕೇವಲ 200 ಗಣ್ಯರನ್ನು ಆಹ್ವಾನಿಸಲಾಗಿದೆ. 64,500 ಚ.ಮೀ. ವಿಸ್ತೀರ್ಣದಲ್ಲಿ ನೂತನ ಸಂಸತ್ ಭವನದ ಕಟ್ಟಡ ನಿರ್ಮಾಣವಾಗಲಿದೆ. ಈ ಕಟ್ಟಡ ಭೂಕಂಪವನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ. ಈ ನೂತನ ಸಂಸತ್ ಭವನದಲ್ಲಿ ಏಕಕಾಲಕ್ಕೆ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಮುಂದೆ ಸಂಸದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭವಿಷ್ಯದ 100 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ಹೊಸ ಸಂಸತ್ ಭವನದ ಆಸನಗಳು 60 ಸೆಂ.ಮೀ. ಅಗಲ ಮತ್ತು 40 ಸೆಂ.ಮೀ. ಎತ್ತರ ಇರಲಿದೆ. ಈ ಕಟ್ಟಡ ನಾಲ್ಕು ಮಹಡಿಗಳನ್ನು ಹೊಂದಿರಲಿದ್ದು, ಆರು ಪ್ರವೇಶದ್ವಾರಗಳನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗಳು ಬರಲು ಒಂದು ದ್ವಾರ, ಲೋಕಸಭೆಯ ಸ್ಪೀಕರ್, ರಾಜ್ಯಸಭಾಧ್ಯಕ್ಷರು ಮತ್ತು ಸಂಸದರು ಬರಲು ಒಂದು ದ್ವಾರ, ಸಂಸದರಿಗಾಗಿ ಮತ್ತೊಂದು ದ್ವಾರ, ಸಾಮಾನ್ಯ ದ್ವಾರ ಮತ್ತು ಸಾರ್ವಜನಿಕರಿಗಾಗಿ ಎರಡು ಪ್ರವೇಶ ದ್ವಾರಗಳು ಇರಲಿವೆ.  ಜಂಟಿ ಅಧಿವೇಶನ ನಡೆಯುವ ಸಮಯದಲ್ಲಿ ಹೊಸ ಲೋಕಸಭೆಯಲ್ಲಿ 1,224 ಸದಸ್ಯರಿಗೆ ಕೂರಲು ಅವಕಾಶ ಕಲ್ಪಿಸಬಹುದಾಗಿದೆ.



 

ಕಾಮೆಂಟ್‌ಗಳಿಲ್ಲ